ಹುಬ್ಬಳ್ಳಿ: ಅಕ್ರಮವಾಗಿ ಸಾರಾಯಿ ಮಾರಲು ಬಂದ ಮೂವರನ್ನು ಹಿಡಿದ ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದ ಘಟನೆ ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ಸಾರಾಯಿ ನಿಷೇಧ ಮಾಡಲಾಗಿದೆ. ಖುದ್ದು ಗ್ರಾಮಸ್ಥರೇ ಸಾರಾಯಿ ನಿಷೇಧ ಮಾಡಿದ್ದಾರೆ. ಆದರೆ ಮೂವರು ಕಾರಿನಲ್ಲಿ ಬಂದು ಸರಾಯಿ ಹಂಚಿಕೆ ಮಾಡುತ್ತಿದ್ದರು. ಈ ವೇಳೆ ಖುದ್ದು ಗ್ರಾಮಸ್ಥರೇ ಕಾರು ಸಮೇತ ಮೂವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Kshetra Samachara
13/08/2021 11:52 am