ಹುಬ್ಬಳ್ಳಿ : ನಗರದ ಹೊರ ವಲಯದ ಕಾರವಾರ ರಸ್ತೆಯಲ್ಲಿ ವ್ಯಕ್ತಿಯೋರ್ವನ ಶವ ಪತ್ತೆಯಾಗಿದೆ. ಅಸ್ಲಾಂ ತಾಳಿಕೋಟ ಎಂಬಾತ ಸಾವಿಗೀಡಾದ ವ್ಯಕ್ತಿ. ಇನ್ನು ಈತನ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲಾ.
ನಿತ್ಯ ಮದ್ಯಪಾನ ಮಾಡುತ್ತಿದ್ದ ಈತ ಕಳೆದೆರಡು ದಿನಗಳಿಂದ ಮಲಗಿದ್ದಲೇ ಮಲಗಿದ್ದನ್ನು ಕಂಡ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಂದ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಸಂಬಂಧಿಕರಿಗೆ ವಿಷಯ ತಿಳಿಸಿ, ನಂತರ ಶವವನ್ನು ಕಿಮ್ಸ್ ರವಾನೆ ಮಾಡಿದ್ದಾರೆ. ಈ ಕುರಿತು ಹಳೇ ಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
15/08/2021 05:35 pm