ಹುಬ್ಬಳ್ಳಿ- ಮೈಸೂರಿನಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಂದು ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳು ಹಾಗೂ ಯುವತಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅತ್ಯಾಚಾರ ಮಾಡಿದ ಆರೋಪಿಗಳನ್ನು ಕೂಡಲೆ ಬಂಧಿಸಿ ಗಲ್ಲಿಗೇರಿಸಬೇಕು. ಅತ್ಯಾಚಾರ ಪ್ರಕರಣಗಳ ವಿಚಾರಣೆಯನ್ನು ಹತ್ತಾರು ವರ್ಷಗಳ ಕಾಲ ಮುಂದೂಡಿದರೆ ಆರೋಪಿಗಳು ಸಾಕ್ಷ್ಯ ನಾಶ, ಬೆದರಿಕೆ ಹಾಕುವ ಕೃತ್ಯ ನಡೆಸುತ್ತಾರೆ. ಇಂತಹವನ್ನು ಯಾವುದೇ ಪರಿಸ್ಥಿತಿಯಲ್ಲಿ ಸಹಿಸಬಾರದು. ನ್ಯಾಯಾಂಗ ವ್ಯವಸ್ಥೆಯಲ್ಲಿ ಸಹ ಶೀಘ್ರ ನ್ಯಾಯ ನೀಡುವಂತಾಗಬೇಕು. ಸರ್ಕಾರ ಕೂಡ ಇಂತಹ ಪ್ರಕರಣಗಳಲ್ಲಿ ಕಠಿಣ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯ ಮಾಡಿದ್ದಾರೆ.
Kshetra Samachara
26/08/2021 08:18 pm