ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕ್ಷುಲ್ಲಕ ಕಾರಣಕ್ಕೆ ಜಿಲ್ಲಾಸ್ಪತ್ರೆ ಸಿಬ್ಬಂದಿಯಿಂದ ಯುವಕರ ಮೇಲೆ ಹಲ್ಲೆ

ಧಾರವಾಡ: ಕ್ಷುಲ್ಲಕ ಕಾರಣಕ್ಕೆ ಧಾರವಾಡ ಜಿಲ್ಲಾ ಆಸ್ಪತ್ರೆಯ ಕೆಲ ಸಿಬ್ಬಂದಿ ಯುವಕರಿಬ್ಬರ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ.

ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಒಳಗಾದ ವೃದ್ಧೆಯನ್ನು ಯುವಕರಿಬ್ಬರು ಬೆಡ್‌ಗೆ ಶಿಫ್ಟ್‌ ಮಾಡಲು ಕೊಠಡಿ ಪ್ರವೇಶ ಮಾಡಿದ್ದೇ ಈ ಹಲ್ಲೆಗೆ ಕಾರಣ ಎಂದು ತಿಳಿದು ಬಂದಿದೆ.

ತೇಜಸ್ವಿನಗರದ ಮಹ್ಮದ್‌ಸಾದಿಕ್ ಸವಣೂರ ಹಾಗೂ ತೌಫಿಕ್ ಎಂಬುವವರೇ ಹಲ್ಲೆಗೊಳಗಾದವರು. ಜಿಲ್ಲಾ ಆಸ್ಪತ್ರೆಯಲ್ಲಿ ಅಟೆಂಡರ್ ಕೆಲಸ ಮಾಡುವ ಸಿಬ್ಬಂದಿಯೇ ಈ ಯುವಕರನ್ನು ಕೊಠಡಿಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಉಪನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Edited By : Nirmala Aralikatti
Kshetra Samachara

Kshetra Samachara

14/09/2021 06:36 pm

Cinque Terre

30.32 K

Cinque Terre

5

ಸಂಬಂಧಿತ ಸುದ್ದಿ