ಧಾರವಾಡ: ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿಯೇ ಹಿರಿಯ ಆರೋಗ್ಯ ಸುರಕ್ಷತಾ ಶುಶ್ರೂಷಕಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ.
ಹಿರಿಯ ಶುಶ್ರೂಷಕಿಯಾಗಿರುವ ಕಮಲಾ ಎಂಬುವವರೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಮುಂದಾಗಿದ್ದಾರೆ. ಇದನ್ನು ಗಮನಿಸಿದ ಸಿಬ್ಬಂದಿ, ಕಮಲಾ ಅವರನ್ನು ಬದುಕಿಸುವಲ್ಲಿ ಸಫಲರಾಗಿದ್ದಾರೆ. ಘಟನೆಯ ನಂತರವೂ ಆಸ್ಪತ್ರೆಯಲ್ಲಿಯೇ ನಾನು ಸಾಯಬೇಕು ಎಂದು ಶುಶ್ರೂಷಕಿ ರೋದಿಸುತ್ತಿದ್ದರಂತೆ ಆಕೆ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾದರೂ ಏಕೆ ಎಂಬುದು ತಿಳಿದುಬಂದಿಲ್ಲ. ಸದ್ಯ ಆಕೆಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Kshetra Samachara
15/09/2021 10:24 pm