ಧಾರವಾಡ: ಕೌಟುಂಬಿಕ ಕಲಹ ಹಿನ್ನೆಲೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಧಾರವಾಡ ಸಮೀಪದ ನವಲೂರು ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ. ಧಾರವಾಡ ಹೊರವಲಯದ ನವಲೂರ ಗ್ರಾಮದ ತೋಟದ ಮನೆಯಲ್ಲಿದ್ದ ವ್ಯಕ್ತಿಯ ಮೇಲೆ ಹಲ್ಲೆ ಮಾಡಲಾಗಿದೆ.
ಮಡಿವಾಳೆಪ್ಪ ಮತ್ತಿಕಟ್ಟಿ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಸೋದರ ಸಂಬಂಧಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಆಸ್ತಿ ವಿಚಾರವಾಗಿ ಕೊಲೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ. ಗಾಯಾಳುವನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
20/09/2021 09:11 am