ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದಲ್ಲೊಂದು ಹೀನ ಕೃತ್ಯ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ಧಾರವಾಡ: ತಿಂಡಿ-ತಿನಿಸು, ಹಣದ ಆಸೆಗೆ ಒಳಗಾದ ಕಮಲಾಪುರದ 14 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಈ ಕುರಿತಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಅಧಿಕೃತವಾಗಿ ಧಾರವಾಡದ ಉಪನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಪೊಲೀಸ್ ಇಲಾಖೆಯಿಂದ, 14 ವರ್ಷದ ಬಾಲಕಿ ಭಿಕ್ಷಾಟನೆಯಲ್ಲಿ ತೊಡಗಿರುವ ಬಗ್ಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ಬಂದಿತ್ತು. ಇದಲ್ಲದೇ ಬಾಲಕಿಯನ್ನು ದುರ್ಬಳಕೆ ಮಾಡುತ್ತಿದ್ದ ಯುವಕನೊಬ್ಬನನ್ನು ಸಾರ್ವಜನಿಕರು ಥಳಿಸಿರುವ ಘಟನೆ ಬಗ್ಗೆಯೂ ಮಕ್ಕಳ ಸಹಾಯವಾಣಿಗೆ ದೂರು ಬಂದಿತ್ತು. ಈ ಮಾಹಿತಿ ಆಧರಿಸಿ ಬಾಲಕಿಯನ್ನು ಹುಡುಕಿ, ನವನಗರದ ಸ್ನೇಹಾ ತೆರೆದ ತಂಗುದಾಣದಲ್ಲಿ ಪತ್ತೆ ಹಚ್ಚಲಾಗಿತ್ತು. ಇದಾದ ಬಳಿಕ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರಾಜೇಶ್ವರಿ ಸಾಲಗಟ್ಟಿ ನೇತೃತ್ವದಲ್ಲಿ ಬಾಲಕಿಯೊಂದಿಗೆ ಆಪ್ತ ಸಮಾಲೋಚನೆ ಕೈಗೊಂಡಾಗ, ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು ಬೆಳಕಿಗೆ ಬಂದಿದೆ.

ಬಾಲಕಿಯ ಹೇಳಿಕೆ ಅನ್ವಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಮಲವ್ವ ಬಲೂರು ಉಪನಗರ ಠಾಣೆಗೆ ದೂರು ಸಲ್ಲಿಸಿದ್ದು, ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ. ಸದ್ಯ ಈ ಕುರಿತಂತೆ ಪ್ರಕರಣ ದಾಖಲಿಸಿಕೊಂಡಿರುವ ಉಪನಗರ ಠಾಣೆ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

22/09/2021 03:57 pm

Cinque Terre

44.63 K

Cinque Terre

24

ಸಂಬಂಧಿತ ಸುದ್ದಿ