ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಯಲ್ಲಿ 24 ಗಂಟೆಯಲ್ಲಿ ಮೊಬೈಲ್ ಕಳ್ಳನ ಸೆರೆ

ಹುಬ್ಬಳ್ಳಿ- ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೋಪ್ಪಿಕರ ರೋಡ್‌ನ ಕಾಳೆ ಚಾಳದಲ್ಲಿ ಕಳ್ಳನೊಬ್ಬ ವ್ಯಕ್ತಿಗೆ ಹೊಡೆದು, ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಯನ್ನು, ದೂರು ದಾಖಲಾದ 24 ಗಂಟೆಯಲ್ಲೇ ಬಂಧಿಸುವಲ್ಲಿ ಉಪನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಉಪನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ರವಿಚಂದ್ರ ಡಿ.ಬಿ. ಮತ್ತು ಸಿಬ್ಬಂದಿ ಆರೋಪಿಯನ್ನು ಬಂಧಿಸಿ ಆತನಿಂದ ಸುಮಾರು 17 ಸಾವಿರ ರೂ.ಮೌಲ್ಯದ ಒಂದು ಮೊಬೈಲ್‌ನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರಪಡಿಸಿದ್ದಾರೆ. ಇನ್ಸಪೆಕ್ಟರ್ ರವಿಚಂದ್ರ ಡಿ.ಬಿ. ಹಾಗೂ ಅವರ ತಂಡದ ಕಾರ್ಯವೈಖರಿಯನ್ನು, ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

26/09/2021 06:17 pm

Cinque Terre

39.16 K

Cinque Terre

1

ಸಂಬಂಧಿತ ಸುದ್ದಿ