ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಚಿರತೆ ದಾಳಿಯ ನಕಲಿ ವಿಡಿಯೋ ಹರಿಬಿಟ್ಟವರ ವಿರುದ್ಧ ಕ್ರಮ:ವದಂತಿ ಹಬ್ಬಿಸಿದವರಿಗೆ ಕಠಿಣ ಕ್ರಮ...!

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನದಿಂದ ಚಿರತೆ ಹಾವಳಿಯಿಂದ ಜನರು ಆತಂಕಗೊಂಡಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಚಿರತೆ ನಕಲಿ ವಿಡಿಯೋ ವೈರಲ್ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಸೈಬರ್ ಕ್ರೈಂ ಠಾಣೆಗೆ ದೂರು ನೀಡಲು ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.

ಹೌದು..ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬೂದನಗುಡ್ಡ ಮಾರ್ಗದಲ್ಲಿ ಕಂಡು ಬಂದಿದ್ದ ಚಿರತೆಯು

ಮಹಿಳೆಯೊಬ್ಬರ ಮೇಲೆ ದಾಳಿ ನಡೆಸಿದೆ ಎಂಬ ನಕಲಿ ವಿಡಿಯೋ ಜಾಲತಾಣದಲ್ಲಿ ವೈರಲ್ ಮಾಡಿದ ಕಿಡಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅರಣ್ಯಾಧಿಕಾರಿಗಳು ಮನವಿ ಮಾಡಿದ್ದಾರೆ.

ಇನ್ನೂ ಮುಂಬೈನ ಹೊರವಲಯದಲ್ಲಿ ಈ ಹಿಂದೆ ಚಿರತೆಯು ಮಹಿಳೆ ಮೇಲೆ ದಾಳಿ ನಡೆಸಿತ್ತು ದಾಳಿ ನಡೆಸಿದ ದೃಶ್ಯ ಸಿಟಿವಿಯಲ್ಲಿ ಸೆರೆಯಾಗಿತ್ತು. ಆ ದಾಳಿಯನ್ನೇ ಬೂದನಗುಡ್ಡದ ಚಿರತೆ ದಾಳಿ ಎಂದು ವದಂತಿ ಹರಿಡಿಸಿದ್ದು, ಅದೇ ವಿಡಿಯೋವನ್ನು ಈ ಭಾಗದಲ್ಲಿ ಕಂಡಿರುವ ಚಿರತೆಗೆ ಹೋಲಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ಜನರಲ್ಲಿ ಆತಂಕ ಮೂಡಿದೆ. ವದಂತಿ ಕೇಳಿ ಬೂದನಗುಡ್ಡದ ಸುತ್ತಮುತ್ತಲಿನ ಜನ ಭಯಭೀತರಾಗಿದ್ದು, ಈ ಹಿನ್ನೆಲೆಯಲ್ಲಿ ಸುಳ್ಳು ಸುದ್ದಿ ಹರಿಬಿಟ್ಟವರ ವಿರುದ್ಧ ಕ್ರಮಕ್ಕೆ ಮನವಿ ಮಾಡಿದ ಅಧಿಕಾರಿಗಳು ಸೈಬರ್ ಕ್ರೈಂ ಠಾಣೆಗೆ ದೂರು ನೀಡಲು ಮುಂದಾಗಿದ್ದಾರೆ.

Edited By : Manjunath H D
Kshetra Samachara

Kshetra Samachara

01/10/2021 12:50 pm

Cinque Terre

58.32 K

Cinque Terre

3

ಸಂಬಂಧಿತ ಸುದ್ದಿ