ಧಾರವಾಡ: ಧಾರವಾಡ ತಾಲೂಕಿನ ಕೋಟೂರು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಶೋಭಾ ದೊಡಮನಿ ಎಂಬುವವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಶೋಭಾ ಅವರು ಆತ್ಮಹತ್ಯೆಗೆ ಯತ್ನಿಸಿರುವುದು ಯಾವ ಕಾರಣಕ್ಕೆ ಎಂಬುದು ಸ್ಪಷ್ಟವಾಗಿ ಗೊತ್ತಾಗಿಲ್ಲ. ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಇವರನ್ನು, ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಗರಗ ಠಾಣೆ ಪೊಲೀಸರು ಭೇಟಿ ನೀಡಿ ವಿಚಾರಣೆ ನಡೆಸುತ್ತಿದ್ದಾರೆ.
Kshetra Samachara
02/10/2021 08:07 pm