ಹುಬ್ಬಳ್ಳಿ: ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿದ ಕಳ್ಳರು, ಮನೆಯ ಬೀಗ ಮುರಿದು ಕಳ್ಳತನ ಮಾಡಿರುವ ಘಟನೆ ನಗರದ ಹೇಮಂತನಗರದಲ್ಲಿ ನಡೆದಿದೆ.
ಸತೀಶ ನಾಯಕ ಎಂಬುವರಿಗೆ ಸೇರಿರುವ ಮನೆಯಲ್ಲಿ ಒಂದು ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಚಿನ್ನಾಭರಣ ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಮನೆಯಲ್ಲಿ ಇರುವ ಟ್ರಿಜರಿ ಹಾಗೂ ಕಪಾಟಗಳುಗಳ ಬೀಗ ಮುರಿದಿದ್ದಾರೆ. ಮನೆಯಲ್ಲಿರುವ ಎಲ್ಲ ವಸ್ತುಗಳು ಚಿಲ್ಲಾಪಿಲ್ಲಿಯಾಗಿವೆ. ಈ ಕುರಿತು ಕೇಶ್ವಾಪುರ ಪೊಲೀಸ್ ಠಾಣೆಯ ಪ್ರಕರಣ ದಾಖಲಾಗಿದ್ದು, ಕಳ್ಳರಿಗಾಗಿ ಪೊಲೀಸರು ಜಾಲ ಬಿಸಿದ್ದಾರೆ.
Kshetra Samachara
06/10/2021 04:26 pm