ಹುಬ್ಬಳ್ಳಿ- ನಗರದ ತಬೀಬಲ್ಯಾಂಡ್ ಬಳಿ ವೇಶ್ಯಾವಾಟಿಕೆ ನಡೆಸುತ್ತಿದ್ದ, ಲಾಡ್ಜ್ ಮೇಲೆ ಮಹಿಳಾ ಠಾಣೆ ಪೊಲೀಸರು ದಾಳಿ ಮಾಡಿ ಇಬ್ಬರನ್ನು ಬಂಧಿಸಿದ್ದಾರೆ.
ಲಾಡ್ಜ್ ನಲ್ಲಿ ಮಹಿಳೆಯರನ್ನು ಕರೆಯಿಸಿ, ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ, ಮಹಿಳಾ ಠಾಣೆ ಇನ್ಸ್‌ಪೆಕ್ಟರ್ ಬಿ.ಎ. ಕಾಮನಬೈಲ್ ಮತ್ತು ಸಿಬ್ಬಂದಿ ದಾಳಿ ಮಾಡಿ ಇಬ್ಬರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಈ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
07/10/2021 11:03 am