ಡಗಿ: ಖಚಿತ ಮಾಹಿತಿಯ ಆಧಾರದ ಮೇಲೆ ಜನರಲ್ಲಿ ಮೂಢನಂಬಿಕೆ ಮೂಲಕ ಮಣ್ಣುಮುಕ್ಕ ಹಾವುಗಳನ್ನು ಎರಡು ತಲೆ ಹಾವುಗಳೆಂದು ನಂಬಿಸಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಹಾವುಗಳ ಸಮೇತ ಬಂಧಿಸಿದ ಘಟನೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದಲ್ಲಿ ಜರುಗಿದೆ.
ಗ್ರಾಮದ ಬೀರಪ್ಪ ನಾಗಪ್ಪ ಮೆಡ್ಲೇರಿ (45) ಬಂಧಿತ ಆರೋಪಿಯಾಗಿದ್ದಾನೆ. ಈತನು ಗ್ರಾಮದಲ್ಲಿರುವ ಮಾಳಿಂಗರಾಯ ದೇವಸ್ಥಾನದ ಅರ್ಚಕನಾಗಿ ಕೆಲಸ ಮಾಡುತ್ತಿದ್ದು, ಆತನಿಂದ ಲಕ್ಷಾಂತರ ರೂಗಳ ಮೌಲ್ಯದ 5 ಮಣ್ಣಮುಕ್ಕ ಹಾವುಗಳನ್ನು ರಕ್ಷಣೆ ಮಾಡಲಾಗಿದೆ.
ಆರೋಪಿಯು ಗ್ರಾಮದಿಂದ ಹಾವುಗಳನ್ನು ಬೇರೆ ಕಡೆಗೆ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡು ದಾಳಿ ನಡೆಸಿದ ಬ್ಯಾಡಗಿ ಹಾಗೂ ರಾಣೆಬೆನ್ನೂರ ವಿಭಾಗದ ಅರಣ್ಯ ಇಲಾಖೆ ಸಿಬ್ಬಂದಿ ಆರೋಪಿಯನ್ನು ಬಂಧಿಸಿ ಹಾವುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು, ಹಾವುಗಳನ್ನು ಅರಣ್ಯಕ್ಕೆ ಬಿಡಲಾಗಿದೆ.
Kshetra Samachara
08/10/2021 12:48 pm