ಧಾರವಾಡ : ಖಾಸಗಿ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಕೆಲಸ ಬಿಟ್ಟು ಅದೇ ಹೋಟೆಲ್ ಗೆ ತೆರಳಿ ಗಲಾಟೆ ಮಾಡಿದ ಘಟನೆ ಧಾರವಾಡ ಜುಬಿಲ್ ವೃತ್ತದ ಬಳಿ ಇರುವ ಖಾಸಗಿ ಹೋಟೆಲ್ ನಲ್ಲಿ ನಡೆದಿದೆ.
ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಗಲಾಟೆ ನಡೆದಿದೆ ಎಂದು ಆರೋಪ ಕೇಳಿ ಬಂದಿದ್ದು, ಈ ಹಿಂದೆ ಅದೇ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಅದೇ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಎಂಬ ಆರೋಪ ಕೇಳಿ ಬಂದಿತ್ತು ಈ ಹಿನ್ನೆಲೆಯಲ್ಲಿ ಆತನನ್ನು ಕೆಲಸದಿಂದ ತೆಗೆದು ಹಾಕಲಾಗಿತ್ತು. ಆದರೆ ಇಂದು ಬೆಳಿಗ್ಗೆ ದಿಡೀರನೇ ಹೋಟೆಲಗೆ ನುಗ್ಗಿ ಗಲಾಟೆ ಶುರು ಮಾಡಿದ್ದಾನೆ. ನಂತರ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಘಟನೆಯು ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Kshetra Samachara
11/10/2021 04:51 pm