ಧಾರವಾಡ: ಜಿಲ್ಲಾಧಿಕಾರಿ ನಡೆ ಗ್ರಾಮದ ಕಡೆ ಎಂಬ ಶೀರ್ಷಿಕೆಯಡಿ ಆರಂಭವಾಗಿರುವ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವಾಹನ ತಡೆದು ಎರಡು ಗುಂಪುಗಳು ಪರಸ್ಪರ ಕೈ-ಕೈ ಮಿಲಾಯಿಸಿದ ಘಟನೆ ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದಲ್ಲಿ ನಡೆದಿದೆ.
ಇಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಗ್ರಾಮ ವಾಸ್ತವ್ಯದ ಭಾಗವಾಗಿ ವನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಕವಲಗೇರಿ ಗ್ರಾಮದ ಗ್ರಾಮಸ್ಥರು ಸರ್ಕಾರಿ ಶಾಲೆಯ ಜಾಗದ ಒತ್ತುವರಿ ಕುರಿತು ಮನವಿ ನೀಡಿ ಜಾಗ ಪರಿಶೀಲಿಸುವಂತೆ ತಿಳಿಸಿದಾಗ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಜಾಗ ವೀಕ್ಷಿಸಿದ್ದಾರೆ.
ಜಿಲ್ಲಾಧಿಕಾರಿ ಜಾಗ ವೀಕ್ಷಣೆಯ ನಂತರ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಇನ್ನೊಂದು ಗುಂಪು ಅದು ನಮ್ಮ ಪಿತ್ರಾರ್ಜಿತ ಆಸ್ತಿ ಎಂದು ಮಾತಿಗೆ ಮಾತು ಬೆಳೆಸಿ ಪರಸ್ಪರ ವಾಗ್ವಾದ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಪೊಲೀಸರು ವಾತಾವರಣ ತಿಳಿಗೊಳಿಸಿದರು.
Kshetra Samachara
16/10/2021 02:35 pm