ಹುಬ್ಬಳ್ಳಿ: ಮತಾಂತರ ಆರೋಪದ ಬೆನ್ನಲ್ಲೇ ಪೊಲೀಸ್ ಠಾಣೆ ಎದುರು ಹಿಂದೂಪರ ಸಂಘಟನೆಗಳ ಪ್ರತಿಭಟನೆ ವೇಳೆ ಬಿಜೆಪಿ ಮುಖಂಡ ನಾಲಿಗೆ ಹರಿ ಬಿಟ್ಟಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹುಬ್ಬಳ್ಳಿ-ಧಾರವಾಡ ಡಿಸಿಪಿ ವಿರುದ್ದ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ವಿಡಿಯೋ ಈ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದು,ಐಪಿಎಸ್ ಅಧಿಕಾರಿಯಾಗಿರುವ ಕೆ.ರಾಮರಾಜನ್ ವಿರುದ್ದ ಅವಾಚ್ಯ ಪದಬಳಕೆ ಮಾಡಿರುವ ವಿಡಿಯೋ ವೈರಲ್ ಆಗಿದೆ.
ಕ್ರೈಸ್ತ ಧರ್ಮಕ್ಕೆ ಮತಾಂತರ ಆರೋಪದ ಹಿನ್ನಲೆಯಲ್ಲಿ ಆರೋಪಿಗಳ ಪರವಾಗಿ ಡಿಸಿಪಿ ಇದ್ದಾರೆಂದು ಹಿಂದೂಪರ ಸಂಘಟನೆ ಮುಖಂಡ ಆರೋಪಿಸಿದ್ದಾರೆ. ಇನ್ನೂ ಭಾಷಣದ ಭರದಲ್ಲಿ ಸರ್ಕಾರಿ ಅಧಿಕಾರಿ ವಿರುದ್ದ ಅವಾಚ್ಯ ಪದ ಬಳಕೆ ಮಾಡಿದ್ದು, 'ಹರಾಮ್ ಕೋರ್ ಡಿಸಿಪಿ' ಅಂತ ಬೈದಿಲ್ಲದೇ ಬೇದರಿಕೆ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Kshetra Samachara
18/10/2021 12:43 pm