ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮೀನು ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ಯುವಕ ಸಾವು

ಹುಬ್ಬಳ್ಳಿ: ಮೀನು ಹಿಡಿಯಲು ಹೋಗಿ ಯುವಕನೋರ್ವ, ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ, ಹುಬ್ಬಳ್ಳಿ ತಾಲೂಕಿನ ಬೊಮ್ಮಸಮುದ್ರ ಗ್ರಾಮದಲ್ಲಿ ನಡೆದಿದೆ.

ಮೃತ ದುರ್ದೈವಿ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ‌. ಈತ ರವಿವಾರ ಆಟೋದೊಂದಿಗೆ ಮೀನು ಹಿಡಿಯಲು ಹೋಗಿದ್ದ ಎನ್ನಲಾಗಿದೆ. ಇಂದು ಮೃತನ ಶವ ಕೆರೆಯಲ್ಲಿ ತೇಲಾಡುತ್ತಿರುವುದನ್ನು ಕಂಡ ಗ್ರಾಮಸ್ಥರು, ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತನ ಕುರಿತಂತೆ ಮಾಹಿತಿ ಕಲೆ ಹಾಕುತ್ತಿದ್ದು, ಮೀನು ಹಿಡಿಯಲು ಹೋಗಿ ಬಿದ್ದು ಸಾವನ್ನಪ್ಪಿದ್ದಾನೆಯೇ? ಅಥವಾ ಇನ್ನಾವುದೇ ಕಾರಣದಿಂದ ಮೃತವಾಗಿದ್ದಾನೆಯೇ? ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

19/10/2021 01:08 pm

Cinque Terre

28.54 K

Cinque Terre

9

ಸಂಬಂಧಿತ ಸುದ್ದಿ