ಧಾರವಾಡ: ತಾರಿಹಾಳ ಬಳಿಯ ಬೈಪಾಸ್‌ನಲ್ಲಿ ಎರಡು ಲಾರಿಗಳ ಮಧ್ಯೆ ಡಿಕ್ಕಿ ಸಂಭವಿಸಿ ಒಂದು ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ.
ಪುಣೆಯಿಂದ ಬೆಂಗಳೂರು ಕಡೆಗೆ ಹೊರಟಿದ್ದ ಲಾರಿಗೆ ಎದುರಿಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ನಂತರ ಚಾಲಕನ ನಿಯಂತ್ರಣ ತಪ್ಪಿದ ಒಂದು ಲಾರಿ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ. ಚಾಲಕರಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
23/10/2021 11:17 am