ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಯಿಂದ ಕೇರಳಕ್ಕೆ ಅಕ್ರಮವಾಗಿ ರಾಸು ಸಾಗಾಟ ಪತ್ತೆ; ಚಾಲಕ, ಕ್ಲೀನರ್ ಸೆರೆ

ಪಡುಬಿದ್ರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಉಡುಪಿ ಜಿಲ್ಲೆಯ ಹೆಜಮಾಡಿ ಟೋಲ್ ಗೇಟ್ ಬಳಿ ತಡೆದ ಪೊಲೀಸರು ಚಾಲಕ ಹಾಗೂ ಕ್ಲೀನರ್‌ನನ್ನು ಬಂಧಿಸಿ, ಜಾನುವಾರುಗಳನ್ನು ರಕ್ಷಿಸಿದ್ದಾರೆ.

ಹುಬ್ಬಳ್ಳಿಯಿಂದ ಕೇರಳಕ್ಕೆ ಅಕ್ರಮವಾಗಿ ಈ ಜಾನುವಾರುಗಳನ್ನು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪಡುಬಿದ್ರಿ ಪೊಲೀಸರು ಈ ದಾಳಿ ನಡೆಸಿದ್ದರು. ಲಾರಿ ಚಾಲಕ ಹಾಗೂ ಕ್ಲೀನರ್‌ನನ್ನು ಬಂಧಿಸಿದ ಪೊಲೀಸರು, ಲಾರಿಯಲ್ಲಿ ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿದ್ದ ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagesh Gaonkar
Kshetra Samachara

Kshetra Samachara

27/10/2021 04:41 pm

Cinque Terre

29.88 K

Cinque Terre

1

ಸಂಬಂಧಿತ ಸುದ್ದಿ