ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮನೆ ಬೀಗ ಮುರಿದು 1.26 ಲಕ್ಷ ರೂ. ಮೌಲ್ಯ ಚಿನ್ನಾಭರಣ

ಹುಬ್ಬಳ್ಳಿ: ಮನೆಗೆ ಬೀಗ ಮುರಿದು ಒಳಗೆ ನುಗ್ಗಿದ ಕಳ್ಳರು ಸುಮಾರು 1.26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಹಳೇ ಹುಬ್ಬಳ್ಳಿಯಲ್ಲಿ ನಡೆದಿದೆ.

ರಣದಮ್ಮ ಕಾಲೋನಿಯ ಆರತಿ ಜಾಧವ ಎಂಬುವರ ಮನೆಯಲ್ಲಿ ಕಳ್ಳತನವಾಗಿದೆ. ಕೆಲಸದ ನಿಮಿತ್ತ ಮನೆಗೆ ಬೀಗ ಹಾಕಿಕೊಂಡು ಊರಿಗೆ ಹೋದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಬೀಗ ಮುರಿದು ಒಳ ಬಂದ ಕಳ್ಳರು, ಮನೆಯಲ್ಲೇ ಡ್ರಾರಾನಲ್ಲಿಟ್ಟಿದ್ದ 1.26 ಲಕ್ಷರೂ. ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ಸಾಮಗ್ರಿಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಈ ಕುರಿತು ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
Kshetra Samachara

Kshetra Samachara

30/10/2021 01:09 pm

Cinque Terre

30.06 K

Cinque Terre

1

ಸಂಬಂಧಿತ ಸುದ್ದಿ