ಧಾರವಾಡ: ಧಾರವಾಡದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ, ಸರ್ಕಾರಿ ಕೆಲಸ ಕಾರ್ಯಗಳಿಗೆಂದು ಬರುವ ಜನರಿಗೆ ಹಣದ ಬೇಡಿಕೆ ಇಡುತ್ತಿದ್ದರು ಎಂಬ ಆರೋಪದ ಮೇಲೆ ಇಲಾಖೆಯ ಮ್ಯಾನೇಜರ್ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ಶಿವಶಂಕರ್ ಹಿರೇಮಠ ಅವರು ಮ್ಯಾನೇಜರ್ ಎಂದು ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ಕಚೇರಿ ಸೇರಿದಂತೆ ಉಳವಿ ಚೆನ್ನಬಸವೇಶ್ವರ ನಗರದಲ್ಲಿರುವ ಅವರ ಮನೆ ಮೇಲೂ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಿನ್ನೆ ತಡರಾತ್ರಿವರೆಗೂ ಅವರನ್ನು ವಿಚಾರಣೆ ನಡೆಸಿ ದಾಖಲೆ ಇಲ್ಲದ 5 ಲಕ್ಷ ರೂಪಾಯಿ ವಶಪಡಿಸಿಕೊಂಡಿದ್ದಾರೆ.
ಗದಗ, ಧಾರವಾಡ ಎಸಿಬಿ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿದ್ದು, ದಾಳಿ ವೇಳೆಯಲ್ಲಿ ಶಿವಶಂಕರ ಹಿರೇಮಠ ಮನೆಯಲ್ಲಿ ಸುಮಾರು 3 ಲಕ್ಷಕ್ಕೂ ಅಧಿಕ ಹಣ, ಕಚೇರಿಗೆ ತಂದ ಕಾರಿನಲ್ಲಿ 1.25 ಲಕ್ಷ ಸೇರಿದಂತೆ ಒಟ್ಟು 5 ಲಕ್ಷಕ್ಕೂ ಅಧಿಕ ಹಣವನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
Kshetra Samachara
31/10/2021 10:12 am