ಹುಬ್ಬಳ್ಳಿ: ಇಲ್ಲಿನ ದುರ್ಗದ ಬೈಲ್‌ನಲ್ಲಿ ಹೊಳೆಯುವ ಕಲ್ಲುಗಳನ್ನು ತಂದು ಇದರಲ್ಲಿ ಬಂಗಾರ ಇದೆ ಎಂದು ಸುಳ್ಳು ಹೇಳಿ ಮಾರಾಟ ಮಾಡಲು ಮುಂದಾಗಿದ್ದ ವ್ಯಕ್ತಿಯೊಬ್ಬನನ್ನು ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿತನಿಂದ 1.35 ಲಕ್ಷ ರೂ. ಮೌಲ್ಯದ 1039 ಗ್ರಾಂ ತೂಕದ 9 ಸ್ಟೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಕೊಪ್ಪಳದ ವಿದ್ಯಾನಗರ ನಿವಾಸಿ ಮೌನೇಶ ಶಿವಪ್ಪ ಅರ್ಕಾಚಾರಿ ಬಂಧಿತ ಆರೋಪಿ, ಇಲೆಕ್ಟಿಕ್ ಕೆಲಸ ಮಾಡಿಕೊಂಡಿರುವ ಮೌನೇಶ ದುರ್ಗದ ಬೈಲ್‌ಗೆ ಬಂದಿದ್ದ. ಹೊಳೆಯುವ ಸ್ಟೋನ್‌ಗಳನ್ನು ತಂದು ಇದರಲ್ಲಿ ಬಂಗಾರ, ಬೆಳ್ಳಿ ಇದೆ ಎಂದು ಸಾರ್ವಜನಿಕರಿಗೆ ನಂಬಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ. ಈ ಬಗ್ಗೆ ಮಾಹಿತಿ ತಿಳಿದ ಕೂಡಲೇ ಇನ್‌ಸ್ಪೆಕ್ಟರ್ ಆನಂದ ಒನಕುದ್ರೆ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದೆ.
Kshetra Samachara
02/11/2021 09:25 am