ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಗಾಂಜಾ ಸೇವಿಸುತ್ತಿದ್ದ ವಿದ್ಯಾರ್ಥಿಗಳು ಅರೆಸ್ಟ್: ಮಾದಕ ವ್ಯಸನದ ನಂಟು...!

ಹುಬ್ಬಳ್ಳಿ: ಇಲ್ಲಿನ ತೋಳನಕೆರೆ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ನಾಲ್ವರು ವಿದ್ಯಾರ್ಥಿಗಳನ್ನು ಗೋಕುಲ ರೋಡ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿತರಿಂದ 75 ಗ್ರಾಂ ಗಾಂಜಾ, ಗಾಂಜಾ ಸೇವನೆಗೆ ಬಳಸುತ್ತಿದ್ದ ವಸ್ತುಗಳು ಹಾಗೂ 3 ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ರಬಕವಿಯ ದಾದಾ ಎಂಬಾತನ ಬಳಿ ಗಾಂಜಾ ಖರೀದಿಸಿದ್ದ ಯುವಕರು, ತೋಳನಕೆರೆಗೆ ಬಳಿ ಸೇವಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಇನ್‌ಸ್ಪೆಕ್ಟರ್‌ ಜೆ.ಎಂ.ಕಾಲಿಮಿರ್ಚಿ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದರು.

ಗಾಂಜಾ ಮಾರಾಟಗಾರ ದಾದಾ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಬಂಧಿತ ಆರೋಪಿಗಳು ನಗರದ ಪ್ರತಿಷ್ಠಿತ ಕಾಲೇಜುಗಳಲ್ಲಿ ಇಂಜಿನಿಯರಿಂಗ್ ಹಾಗೂ ಎಂಬಿಎ ವ್ಯಾಸಂಗ ಮಾಡುತ್ತಿದ್ದಾರೆ ಎಂಬ ಕಳವಳಕಾರಿ ಅಂಶ ಗೊತ್ತಾಗಿದೆ.

Edited By : Nagaraj Tulugeri
Kshetra Samachara

Kshetra Samachara

02/11/2021 09:31 am

Cinque Terre

43.85 K

Cinque Terre

15

ಸಂಬಂಧಿತ ಸುದ್ದಿ