ಧಾರವಾಡ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ವೃದ್ಧರೊಬ್ಬರು ಬರ್ಬರವಾಗಿ ಕೊಲೆಯಾಗಿರುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಆಯಟ್ಟಿ ಗ್ರಾಮದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ವಿರುಪಾಕ್ಷಪ್ಪ ಆಚಮಟ್ಟಿ (58) ಮೃತ ದುರ್ದೈವಿ. ಲಕ್ಷ್ಮಣ ಎಂಬಾತ ಕೊಲೆಗೈದ ಆರೋಪಿ. ಆಸ್ತಿ ವಿಚಾರವಾಗಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಉಂಟಾದ ಜಗಳ ವಿಕೋಪಕ್ಕೆ ತಿರುಗಿ ವೃದ್ಧನ ಕೊಲೆಯಲ್ಲಿ ಅಂತ್ಯವಾಗಿದೆ.
ಈ ಸಂಬಂಧ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Kshetra Samachara
06/11/2021 09:39 am