ಧಾರವಾಡ: ಧಾರವಾಡ ಸಪ್ತಾಪುರದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ.
ಧೃವ ಅನೀಕ ಮದಾನ, ಉಮೇಶ ಶಿವಕುಮಾರ ಮಡಿವಾಳ ಎಂಬುವವರೇ ಬಂಧಿತ ಆರೋಪಿಗಳು.
ಈ ಇಬ್ಬರೂ ಧಾರವಾಡದ ಶಿವಗಿರಿ, ಸಾಯಿ ಹಾಸ್ಟೆಲ್ ಬಳಿ, ಜಯನಗರ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು 400 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ.
Kshetra Samachara
11/11/2021 03:47 pm