ಕುಂದಗೋಳ : ತಾಲೂಕಿನ ಚಾಕಲಬ್ಬಿ ಗ್ರಾಮದ ಸಾರ್ವಜನಿಕ ಪ್ರದೇಶದಲ್ಲಿ ಇಸ್ಪೀಟ್ ಆಟ ಆಡುತ್ತಿದ್ದ 13 ಜನರನ್ನು ಕುಂದಗೋಳ ಗ್ರಾಮೀಣ ಪೊಲೀಸರು ಕಳೆದ ಬುಧವಾರ ಬಂಧಿಸಿದ್ದಾರೆ.
ಹೌದು ! ಚಾಕಲಬ್ಬಿ ಗ್ರಾಮದ ದ್ಯಾಮವ್ವದೇವಿ ದೇವಸ್ಥಾನದ ಸಾರ್ವಜನಿಕ ಪ್ರದೇಶದಲ್ಲಿ ಚಾಕಲಬ್ಬಿ, ಬಸಾಪೂರ, ಹಿರೇನರ್ತಿ, ನಲವಡಿ ಗ್ರಾಮದ 13 ಜನ ವ್ಯಕ್ತಿಗಳು ಇಸ್ಪೀಟ್ ಆಟ ಆಡುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕುಂದಗೋಳ ಗ್ರಾಮೀಣ ಪೊಲೀಸರು ಬಂಧಿತರಿಂದ 3690 ರೂಪಾಯಿ ನಗದು ಹಣ ಹಾಗೂ ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.
Kshetra Samachara
13/11/2021 04:08 pm