ಹುಬ್ಬಳ್ಳಿ: ಅದು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬಾಂಬ್ ಸ್ಪೋಟ್ ಪ್ರಕರಣ. ಎರಡೂ ವರ್ಷಗಳಾದರೂ ಕೂಡ ಒಂದೇ ಒಂದು ಸಾಕ್ಷಿ,ಪುರಾವೆಗಳು ಸಿಕ್ಕಿಲ್ಲ. ಹಾಗಿದ್ದರೇ ಚಾಲಾಕಿಗಳು ಕೇಂದ್ರ ಸರ್ಕಾರದ ಕಣ್ಣಿಗೆ ಮಣ್ಣು ಎರೆಚಿದ್ದಾರೆ. ಎರಡು ವರ್ಷಗಳಾದರೂ ತನಿಖೆ ಪೂರ್ಣಗೊಂಡಿಲ್ಲ. ಈ ಹಿನ್ನಲೆಯಲ್ಲಿ ತನಿಖೆಯೇ ಹಳಿ ತಪ್ಪಿದೆಯಾ ಎಂಬುವಂತ ಅನುಮಾನ ಕಾಡತೋಡಗಿದೆ.
ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ ರೈಲು ನಿಲ್ದಾಣದ ನಾಡ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ವರ್ಷ ಕಳೆದರು ಆರೋಪಿಗಳು ಪತ್ತೆಯಾಗಿಲ್ಲ. ಅಲ್ಲದೇ ಪ್ರಕರಣವನ್ನು ತಾತ್ಕಾಲಿಕವಾಗಿ ಖುಲಾಸೆ ಮಾಡಲು ರೈಲ್ವೆ ಪೊಲೀಸರು ಮುಂದಾಗಿದ್ದಾರೆ. ಹುಬ್ಬಳ್ಳಿಯ 2ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ‘ಸಿ ರಿಪೋರ್ಟ್’ ಸಲ್ಲಿಸಿದ್ದಾರೆ. 2019ರ ಅಕ್ಟೋಬರ್ 21ರಂದು ಹುಬ್ಬಳ್ಳಿ- ವಿಜಯವಾಡ ನಡುವೆ ಸಂಚರಿಸುವ ಅಮರಾವತಿ ಎಕ್ಸ್‌ಪ್ರೆಸ್ ರೈಲಿನ ಕೊನೆಯ ಬೋಗಿಯಲ್ಲಿ 8 ನಾಡ ಬಾಂಬ್‌ಗಳಿದ್ದ ಬಕೆಟ್ ಪತ್ತೆಯಾಗಿತ್ತು. ಇದರಲಿದ್ದ ಒಂದು ಬಾಂಬ್ ಸ್ಪೋಟಗೊಂಡ ಪರಿಣಾಮ ಚಹಾ ಮಾರುವ ಕಾರ್ಮಿಕ ಹುಸೇನಸಾಬ ನಾಯಕವಾಲೆ ಎಂಬಾತನ ಬಲಗೈ ಛಿದ್ರಗೊಂಡಿತ್ತು. ಈ ಕುರಿತು ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇನ್ನೂ ಸ್ಫೋಟಗೊಂಡ ಸ್ಥಳಕ್ಕೆ ಅಂದಿನ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ, ಮತ್ತಿತರರು ಭೇಟಿ ನೀಡಿ ತನಿಖೆಗೆ ಆದೇಶಿಸಿದ್ದರು. ಯಾವುದೇ ಸಾಕ್ಷಿ, ಪುರಾವೆ, ಆರೋಪಿಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ರೇಲ್ವೆ ಪೊಲೀಸರು 2ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಸಿ ರಿಪೋರ್ಟ್ ಸಲ್ಲಿಸಿದ್ದಾರೆ. ಸಾಕಷ್ಟು ಕುತೂಹಲಕ್ಕೆ ಕಾರಣವಾಗಿರುವ ಅಂಶ ಅಂದರೆ, ವಿಜಯವಾಡದಿಂದ ಹುಬ್ಬಳ್ಳಿಗೆ ಬಂದಿದ್ದ ಅಮರಾವತಿ ಎಕ್ಸ್‌ಪ್ರೆಸ್ ರೈಲು ನಾಲ್ಕನೇ ಪ್ಲಾಟ್‌ಫಾರ್ಮ್‌ನಲ್ಲಿ ನಿಂತಿತ್ತು. ಎಲ್ಲ ಪ್ರಯಾಣಿಕರು ಇಳಿದ ಬಳಿಕ ಸ್ವಚ್ಛತಾ ಕಾರ್ಮಿಕನೊಬ್ಬನಿಗೆ 8 ಲಿಂಬೆಹಣ್ಣಿನ ಗಾತ್ರದ ಕಚ್ಚಾ ಬಾಂಬ್‌ಗಳಿದ್ದ ಬಕೆಟ್ ಸಿಕ್ಕಿತ್ತು.
ಒಟ್ಟಿನಲ್ಲಿ ಕೇಂದ್ರ ಸರ್ಕಾರದ ನಿಷ್ಕಾಳಜಿಯೋ ಅಥವಾ ರೈಲ್ವೆ ಇಲಾಖೆಯ ನಿರ್ಲಕ್ಷ್ಯವೋ ಗೊತ್ತಿಲ್ಲ. ಎರಡು ವರ್ಷ ಕಳೆದರೂ ತನಿಖೆ ಪೂರ್ಣಗೊಳ್ಳದೇ. ಸ್ಪೋಟಕದ ತನಿಖೆ ಹಳಿ ತಪ್ಪಿದೆ.
Kshetra Samachara
16/11/2021 06:38 pm