ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಅಪರಿಚಿತ ವಾಹನ ಡಿಕ್ಕಿ- ಬೈಕ್ ಸವಾರ ಸಾವು

ಹುಬ್ಬಳ್ಳಿ: ತಾಲೂಕಿನ ಹೊರವಲಯ ಕುಂದಗೋಳ ಕ್ರಾಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಬೈಕ್ ಸವಾರನೋರ್ವ ಮೃತಪಟ್ಟಿದ್ದಾರೆ.

ತಾಲೂಕಿನ ಕರಡಿಕೊಪ್ಪ ಗ್ರಾಮದ ಲಕ್ಷಣ ಬಸಪ್ಪ ಜಾಧವ (29) ಮೃತಪಟ್ಟ ಬೈಕ್ ಸವಾರ. ಲಕ್ಷ್ಮಣ ಕರಡಿಕೊಪ್ಪದಿಂದ ಹುಬ್ಬಳ್ಳಿ ಕಡೆಗೆ ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಲಕ್ಷ್ಮಣ ಅವರನ್ನು ಕಿಮ್ಸ್‌ಗೆ ರವಾನಿಸಲಾಯಿತಾದರೂ ಚಿಕಿತ್ಸೆಗೆ ಫಲಿಸದೆ ಮೃತಪಟ್ಟಿದ್ದಾರೆ. ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
Kshetra Samachara

Kshetra Samachara

17/11/2021 09:09 am

Cinque Terre

63.34 K

Cinque Terre

5

ಸಂಬಂಧಿತ ಸುದ್ದಿ