ಹುಬ್ಬಳ್ಳಿ: ಇಲ್ಲಿಯ ಗಬ್ಬೂರು ಬೈಪಾಸ್ ಡಿಸ್ನಿ ಲ್ಯಾಂಡ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಆರ್ಥಿಕ ಮತ್ತು ಮಾದಕ ಅಪರಾಧ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿತರಿಂದ 28,260 ರೂ. ಮೌಲ್ಯದ 3 ಕೆ.ಜಿ. 626 ಗ್ರಾಂ ಗಾಂಜಾ ಹಾಗೂ ಒಂದು ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಆರ್ಥಿಕ ಮತ್ತು ಮಾದಕ ಅಪರಾಧ ಠಾಣಿ ಇನ್‌ಸ್ಪೆಕ್ಟರ್ ಎಂ.ಎಸ್. ಹೂಗಾರ, ಪಿಎಸ್‌ಐ ಸದಾಶಿವ ಕಾನಶೆಟ್ಟಿ ನೇತೃತ್ವದ ತಂಡ ದಾಳಿ ನಡೆಸಿತ್ತು. ಆರ್ಥಿಕ ಮತ್ತು ಮಾದಕ ಅಪರಾಧ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Kshetra Samachara
18/11/2021 09:03 am