ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಬಸ್‌ ನಿಲ್ದಾಣದಲ್ಲೇ ವಿದ್ಯಾರ್ಥಿಗಳ ಮಾರಾಮಾರಿ

ಧಾರವಾಡ: ಧಾರವಾಡದ ಬಸ್ ನಿಲ್ದಾಣದಲ್ಲೇ ವಿದ್ಯಾರ್ಥಿಗಳು ಮಾರಾಮಾರಿ ನಡೆಸಿರುವ ಘಟನೆ ನಡೆದಿದೆ.

ಇಬ್ಬರು ವಿದ್ಯಾರ್ಥಿಗಳ ಮೇಲೆ 20ಕ್ಕೂ ಹೆಚ್ಚು ಜನ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಶನಿವಾರವೇ ಈ ಘಟನೆ ನಡೆದಿದ್ದು, ವಿದ್ಯಾರ್ಥಿಗಳ ಗುಂಪು ಘರ್ಷಣೆಯ ವೀಡಿಯೋ ಇದೀಗ ವೈರಲ್ ಆಗಿದೆ.

ಈ ಗಲಾಟೆಗೆ ಕಾರಣ ಏನೆಂದು ತಿಳಿದುಬಂದಿಲ್ಲ. ಇಬ್ಬರು ವಿದ್ಯಾರ್ಥಿಗಳ ಮೇಲೆ ಮತ್ತಷ್ಟು ಜನ ವಿದ್ಯಾರ್ಥಿಗಳು ಎರಡು ತಂಡಗಳಾಗಿ ಮಾಡಿಕೊಂಡು ಹಲ್ಲೆ ನಡೆಸಿದ್ದಾರೆ. ಶಹರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Edited By : Manjunath H D
Kshetra Samachara

Kshetra Samachara

21/11/2021 04:45 pm

Cinque Terre

54.71 K

Cinque Terre

27

ಸಂಬಂಧಿತ ಸುದ್ದಿ