ಹುಬ್ಬಳ್ಳಿ: ಇಲ್ಲಿನ ಉಣಕಲ್ ಟಿಂಬರ್ ಯಾರ್ಡ್‌ನಲ್ಲಿ ಸೋಮವಾರ ಇಸ್ಪೀಟ್ ಜೂಜಾಡುತ್ತಿದ್ದ ನಾಲ್ವರನ್ನು ವಿದ್ಯಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜೂಜಾಟದ ಖಚಿತ ಮಾಹಿತಿಯನ್ನು ಕಲೆ ಹಾಕಿದ ಖಾಕಿ ಪಡೆ ಜೂಜಾಟದ ಅಡ್ಡೆಯ ಮೇಲೆ ದಾಳಿ ನಡೆಸಿ ನಾಲ್ವರು ಜೂಜುಕೋರರನ್ನು ವಶಕ್ಕೆ ಪಡೆದಿದೆ. ಬಂಧಿತರಿಂದ 8,260 ರೂ. ನಗದು ವಶಪಡಿಸಿಕೊಂಡಿದ್ದಾರೆ. ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
24/11/2021 12:22 pm