ಧಾರವಾಡ: ಹಿರಿಯ ಸಂಶೋಧಕರಾಗಿದ್ದ ಡಾ.ಎಂ.ಎಂ.ಕಲಬುರ್ಗಿ ಕೊಲೆ ಆರೋಪಿಗಳನ್ನು ಪೊಲೀಸರು ಬಿಗಿ ಭದ್ರತೆ ಮಧ್ಯೆ ಧಾರವಾಡದ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಕಲಬುರ್ಗಿ ಹತ್ಯೆ ಸಂಬಂಧ ವಿಚಾರಣೆಗಾಗಿ ಪೊಲೀಸರು ಧಾರವಾಡದ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಎದುರು ಆರೋಪಿಗಳನ್ನು ಹಾಜರುಪಡಿಸಿದರು.
ಮುಂಬೈನ ಆರ್ಥರರೋಡ್ ಜೈಲಿನಿಂದ ಎರಡು ಡಿಎಆರ್ ಪೊಲೀಸ್ ವಾಹನದಲ್ಲಿ ಆರೋಪಿಗಳನ್ನು ಕರೆದುಕೊಂಡು ಬರಲಾಗಿತ್ತು. ನ್ಯಾಯಾಲಯ ಆರೋಪಿಗಳನ್ನು ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿದೆ.
Kshetra Samachara
24/11/2021 03:13 pm