ಹುಬ್ಬಳ್ಳಿ: ಖೊಟ್ಟಿ ದಾಖಲೆ ಸೃಷ್ಟಿಸಿ ಮೂರೂವರೆ ಲಕ್ಷ ರೂ. ಸಾಲ ಪಡೆದು 26 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಕೇಶ್ವಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಗೋಕುಲ ರೋಡ್ ಗಾಂಧಿನಗರ ನಿವಾಸಿ ಹನಮಂತ ಸುಂಕಪ್ಪ ಮುಳಗುಂದ ಬಂಧಿತ ಆರೋಪಿ, ಯಾರದ್ದೋ ಜಮೀನಿನ ದಾಖಲೆಗಳನ್ನು ನಕಲು ಮಾಡಿ ಖೊಟ್ಟಿ ದಾಖಲೆ ಸೃಷ್ಟಿಸಿ ಕೆಎಸ್‌ಎಫ್‌ಸಿಯಲ್ಲಿ ಸಾಲ ಪಡೆದು ವಂಚಿಸಿ ಪರಾರಿಯಾಗಿದ್ದ. 26 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಕೇಶ್ವಾಪುರ ಠಾಣೆ ಇನ್‌ಸ್ಪೆಕ್ಟರ್ ಜಗದೀಶ ಹಂಚಿನಾಳ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿದೆ. ಈ ತಂಡದ ಕಾರ್ಯಕ್ಕೆ ಪೊಲೀಸ್ ಆಯುಕ್ತ ಲಾಭೂರಾಮ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
Kshetra Samachara
30/11/2021 10:20 am