ಧಾರವಾಡ: ಮೊನ್ನೆಯಷ್ಟೆ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಹಣದ ವ್ಯವಹಾರಕ್ಕಾಗಿ ಎರಡು ಗುಂಪುಗಳ ಮಧ್ಯೆ ನಡೆದ ಮಾರಾಮಾರಿ ಘಟನೆ ಮಾಸುವ ಮುನ್ನವೇ ಧಾರವಾಡದ ಪ್ರತಿಷ್ಠಿತ ಕರ್ನಾಟಕ ಕಾಲೇಜು ಆವರಣದಲ್ಲಿ ಅಂತದ್ದೇ ಮತ್ತೊಂದು ಘಟನೆ ನಡೆದಿದೆ.
ಕಾಲೇಜು ಕ್ಯಾಂಪಸ್‌ನಲ್ಲಿ ಹೊಡೆದಾಡಿಕೊಂಡವರು ಕಾಲೇಜು ವಿದ್ಯಾರ್ಥಿಗಳು ಎಂದು ಗೊತ್ತಾಗಿದೆ. ಕ್ಷುಲ್ಲಕ ಕಾರಣಕ್ಕಾಗಿ ಎರಡು ವಿದ್ಯಾರ್ಥಿ ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ. ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Kshetra Samachara
02/12/2021 03:46 pm