ನವಲಗುಂದ : ಕೆರೆಯಲ್ಲಿ ಮುಳುಗಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನವಲಗುಂದ ತಾಲ್ಲೂಕಿನ ಅಳಗವಾಡಿ ಗ್ರಾಮದಲ್ಲಿ ನಡೆದಿದೆ.
ಇನ್ನು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಅದೇ ಗ್ರಾಮದ 25 ವರ್ಷ ವಯಸ್ಸಿನ ರವಿ ಗೊಬ್ಬರಗುಂಪಿ ಎಂದು ಗುರುತಿಸಲಾಗಿದ್ದು, ಇಂದು ಬೆಳಿಗ್ಗೆ ಕೆರೆಯಲ್ಲಿ ಆತನ ಮೃತ ದೇಹ ನೀರಲ್ಲಿ ತೇಲುವ ದೃಶ್ಯ ಗ್ರಾಮಸ್ಥರ ಕಣ್ಣಿಗೆ ಬಿದ್ದಿದೆ. ಕೂಡಲೇ ಗ್ರಾಮಸ್ಥರು ನವಲಗುಂದ ಪೊಲೀಸ್ ಠಾಣೆಗೆ ವಿಷಯ ಮುಟ್ಟಿಸುತ್ತಲೇ, ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Kshetra Samachara
03/12/2021 09:02 am