ಧಾರವಾಡ: ಅರಣ್ಯ ಇಲಾಖೆ ಹಿರಿಯ ಅಧಿಕಾರಿಯೊಬ್ಬರ ಮೇಲೆ ಅತ್ಯಾಚಾರದ ಆರೋಪ ಕೇಳಿ ಬಂದಿದೆ.
ಮದುವೆಯಾಗುವುದಾಗಿ ನಂಬಿಸಿ ಮಹಿಳೆಯೊಬ್ಬರ ಮೇಲೆ ಅರಣ್ಯ ಇಲಾಖೆ ಅಧಿಕಾರಿ ಅತ್ಯಾಚಾರವೆಸಗಿದ್ದರು. ಆದರೆ ಈಗ ಆ ಮಹಿಳೆಗೆ ಅರಣ್ಯ ಇಲಾಖೆ ಅಧಿಕಾರಿ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಸ್ವತಃ ಸಂತ್ರಸ್ತೆ ಇದೀಗ ಧಾರವಾಡದ ಉಪನಗರ ಠಾಣೆ ಮೆಟ್ಟಿಲೇರಿದ್ದಾರೆ.
ಅಕ್ಟೋಬರ್ 22ರಂದು ಇದೇ ವಿಷಯ ಸಂಬಂಧ ದೆಹಲಿಯ ಚಾಣಕ್ಯಪುರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಈ ಘಟನೆ ಧಾರವಾಡದಲ್ಲಿ ನಡೆದಿದ್ದರಿಂದ ಪ್ರಕರಣವನ್ನು ಧಾರವಾಡ ಉಪನಗರ ಠಾಣೆಗೆ ವರ್ಗಾಯಿಸಲಾಗಿದೆ.
2019ರಲ್ಲಿ ಆ ಅಧಿಕಾರಿ ಧಾರವಾಡದ ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಹಿಳೆಯನ್ನು ತಮ್ಮ ವಸತಿ ಗೃಹಕ್ಕೆ ಕರೆಯಿಸಿಕೊಂಡು ಅತ್ಯಾಚಾರವೆಸಗಿದ್ದ. ಅಲ್ಲದೇ ಮದುವೆಯಾಗುವುದಾಗಿಯೂ ನಂಬಿಸಿದ್ದ. ನಂತರ ಆ ಅಧಿಕಾರಿ ಶಿವಮೊಗ್ಗಕ್ಕೆ ವರ್ಗಾವಣೆಯಾದ ಬಳಿಕ ಮಹಿಳೆಯನ್ನು ನಿರ್ಲಕ್ಷಿಸಿ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದು ಬಂದಿದೆ.
Kshetra Samachara
05/12/2021 09:09 am