ಧಾರವಾಡ: ಮಾನಸಿಕವಾಗಿ ಅಸ್ವಸ್ಥಗೊಂಡಿದ್ದ ಗೃಹಿಣಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ನಡೆದಿದೆ.
ನಿರ್ಮಲಾ ಕೋಟೂರ (40) ಎಂಬ ಮಹಿಳೆಯೇ ಆತ್ಮಹತ್ಯೆ ಮಾಡಿಕೊಂಡವರು. ವಿವಾಹವಾಗಿದ್ದ ನಿರ್ಮಲಾ, ಮಾನಸಿಕವಾಗಿ ಅಸ್ವಸ್ಥಗೊಂಡ ನಂತರ ಗಂಡನ ಮನೆಯಾದ ಅಮ್ಮಿನಬಾವಿ ಗ್ರಾಮದಿಂದ ತನ್ನ ತವರು ಮನೆ ಉಪ್ಪಿನ ಬೆಟಗೇರಿ ಗ್ರಾಮಕ್ಕೆ ಬಂದಿದ್ದರು. ಇಂದು ಏಕಾಏಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.
Kshetra Samachara
08/12/2021 09:52 pm