ಧಾರವಾಡ: ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದ ರಸ್ತೆಯ ಬಳಿ ಅಪರಿಚಿತ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ.
ಸುಮಾರು 35 ರಿಂದ 40 ವರ್ಷ ವಯಸ್ಸಿನ ವ್ಯಕ್ತಿ ಈತನಾಗಿದ್ದು, ತಲೆಗೆ ಗಂಭೀರ ಸ್ವರೂಪದ ಗಾಯವಾಗಿ ಮೃತಪಟ್ಟಿದ್ದಾನೆ. ಇದನ್ನು ನೋಡಿದವರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.
ಸಾವಿಗೀಡಾಗಿರುವ ವ್ಯಕ್ತಿ ಚಪ್ಪಲಿ ಬಿಟ್ಟ ಸ್ಥಳಕ್ಕೂ ಬಿದ್ದು ಸಾವಿಗೀಡಾಗಿರುವ ಸ್ಥಳಕ್ಕೂ ಅಂತರವಿದೆ. ತಲೆಗೆ ಬಲವಾದ ಪೆಟ್ಟಾಗಿದೆ. ಸದ್ಯ ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.
Kshetra Samachara
13/12/2021 08:31 am