ಧಾರವಾಡ: ಪತ್ನಿಯೊಬ್ಬಳು ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಂದು ಹಾಕಿರುವ ಘಟನೆ ಧಾರವಾಡ ತಾಲೂಕಿನ ಮುಳಮುತ್ತಲ ಗ್ರಾಮದಲ್ಲಿ ನಡೆದಿದೆ.
ಈ ಕೊಲೆಗೆ ಅನೈತಿಕ ಸಂಬಂಧ ಕಾರಣ ಎನ್ನಲಾಗಿದೆ. ಮುಳಮುತ್ತಲ ಗ್ರಾಮದ ಭೀಮಪ್ಪ ಸಿದ್ದಣ್ಣವರ ಎಂಬಾತನೇ ಕೊಲೆಗೀಡಾದ ವ್ಯಕ್ತಿ.
ಈತನ ಪತ್ನಿ ಕಾವೇರಿ ಹಾಗೂ ಆಕೆಯ ಪ್ರಿಯಕರ ಶಿವು ನಿಂಬೋಜಿ ಎಂಬುವವರು ಸೇರಿಕೊಂಡು ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದಾರೆ. ಭೀಮಣ್ಣನ ಪತ್ನಿ ಕಾವೇರಿ ಮದುವೆಯಾದ ನಂತರವೂ ಶಿವು ಎಂಬಾತನ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಇದೇ ಕಾರಣಕ್ಕೆ ಪದೇ ಪದೇ ಮನೆಯಲ್ಲಿ ಜಗಳ ನಡೆಯುತ್ತಿತ್ತು. ಹೀಗಾಗಿ ತನ್ನ ಪ್ರಿಯಕರನ ಜೊತೆಗೂಡಿ ಪತಿಯನ್ನೇ ಕೊಲೆ ಮಾಡಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗರಗ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ದೂರು ದಾಖಲಿಸಿಕೊಂಡಿದ್ದಾರೆ.
Kshetra Samachara
14/12/2021 11:11 am