ಧಾರವಾಡ: ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯ್ತಿ ಸದಸ್ಯನೊಬ್ಬ ಯುವಕನೋರ್ವನನ್ನು ಥಳಿಸಿರುವ ಆರೋಪ ಕೇಳಿ ಬಂದಿದೆ.
ಉಪ್ಪಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯ್ತಿ ಸದಸ್ಯ ಸೈಯದ್‌ಸಾಬ್ ಮದ್ನಿ ಎಂಬುವವರು ಅದೇ ಗ್ರಾಮದ ಯುವಕ ಮಹ್ಮದ್ ಸಾದೀಕ್ ಲಾಲ್ಮಿಯಾ ಎಂಬಾತನನ್ನು ಥಳಿಸಿದ್ದಾರೆ ಎನ್ನಲಾಗಿದೆ.
ಮಹ್ಮದ್ ಸಾದೀಕ್‌ನ ತಮ್ಮನ ಹತ್ತಿರ ಗ್ರಾಮ ಪಂಚಾಯ್ತಿ ಸದಸ್ಯ ಗುಟ್ಕಾ ಚೀಟು ಸೇರಿದಂತೆ ಇತ್ಯಾದಿ ತಂಬಾಕು ಉತ್ಪನ್ನಗಳನ್ನು ತರಿಸುತ್ತಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಮಹ್ಮದ್ ಸಾದೀಕ್‌ನನ್ನು ಗ್ರಾಮ ಪಂಚಾಯ್ತಿ ಸದಸ್ಯ ಸೈಯದ್‌ಸಾಬ್ ಹಾಗೂ ಆತನ ಸಹೋದರ ಸೇರಿಕೊಂಡು ಥಳಿಸಿದ್ದಾರೆ ಎಂದು ಮಹ್ಮದ್ ಸಾದೀಕ್‌ನ ಸಂಬಂಧಿಕರು ಆರೋಪಿಸಿದ್ದಾರೆ.
ಸದ್ಯ ಥಳಿತಕ್ಕೊಳಗಾದ ಯುವಕ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಸಂಬಂಧ ಆತನ ಕುಟುಂಬಸ್ಥರು ಗರಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಸಂಬಂಧ ಪಬ್ಲಿಕ್ ನೆಕ್ಸ್ಟ್‌ಗೆ ಪ್ರತಿಕ್ರಿಯೆ ನೀಡಿರುವ ಗ್ರಾಪಂ ಸದಸ್ಯ ಸೈಯದ್‌ಸಾಬ್, ನಾನು ಯುವಕನನ್ನು ಥಳಿಸಿಲ್ಲ. ವಿನಾಕಾರಣ ನನ್ನ ಮೇಲೆ ಆರೋಪ ಮಾಡಿದ್ದಾರೆ. ಆ ಯುವಕನೇ ನನ್ನ ಕೊರಳಪಟ್ಟಿ ಹಿಡಿದು ಎಳೆದಾಡಿದ್ದಾನೆ ಎಂದು ತಮ್ಮ ಮೇಲೆ ಬಂದಿರುವ ಆರೋಪವನ್ನು ಅಲ್ಲಗಳೆದಿದ್ದಾರೆ.
Kshetra Samachara
21/12/2021 07:23 pm