ಧಾರವಾಡ: ಸಾಲಬಾಧೆಯಿಂದ ರೈತನೋರ್ವ ತನ್ನ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಮುಗಳಿ ಗ್ರಾಮದಲ್ಲಿ ನಡೆದಿದೆ.
ರಾಮಚಂದ್ರಪ್ಪ ವಾಲೀಕಾರ ಎಂಬ ರೈತನೇ ಆತ್ಮಹತ್ಯೆ ಮಾಡಿಕೊಂಡವನು. ಕೃಷಿ ಚಟುವಟಿಕೆಗಾಗಿ ರಾಮಚಂದ್ರಪ್ಪ ಸಾಲ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.
Kshetra Samachara
24/12/2021 09:43 am