ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಬಾಲಕಿ ಮೇಲೆ ಸಮೂಹಿಕ ಅತ್ಯಾಚಾರ- ಆರು ಜನ ಅಪ್ರಾಪ್ತರು ಪೊಲೀಸ್ ವಶಕ್ಕೆ

ಧಾರವಾಡ: ನಿನ್ನೆ ಅಪ್ತಾಪ್ತ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಆರು ಜನರನ್ನು ವಶಕ್ಕೆ ಪಡೆದಿದ್ದಾರೆ.

ಅತ್ಯಾಚಾರ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಈ ಆರೋಪಿಗಳನ್ನು ವಶಕ್ಕೆ ಪಡೆದು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಧಾರವಾಡದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಯಾಗಿರುವ ಬಾಲಕಿಯನ್ನು ಹೊರವಲಯಕ್ಕೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಅತ್ಯಾಚಾರ ಎಸಗಿದವರು ಸಹ ಅಪ್ರಾಪ್ತರಾಗಿದ್ದಾರೆ ಎಂಬ ಮಾಹಿತಿಯಿದೆ. ಈ ಕಾರಣದಿಂದ ಪೊಲೀಸರು ಹೆಚ್ಚಿನ ಮಾಹಿತಿ‌ ನೀಡಲು ನಿರಾಕರಿಸಿದ್ದಾರೆ. ಖಾಸಗಿ ವೀಡಿಯೋ ತೋರಿಸಿ ನಿರಂತರ ಅತ್ಯಾಚಾರ ನಡೆಸಲಾಗಿದೆ ಎನ್ನಲಾಗುತ್ತಿದೆ. ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಧಾರವಾಡ ಶಹರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Edited By :
Kshetra Samachara

Kshetra Samachara

27/12/2021 01:45 pm

Cinque Terre

44.11 K

Cinque Terre

6

ಸಂಬಂಧಿತ ಸುದ್ದಿ