ಹುಬ್ಬಳ್ಳಿ: ಪೆಟ್ರೋಲ್ ಬಂಕ್ ನಲ್ಲಿ ಲಾರಿಯ ಚಾಲಕನೋರ್ವನಿಗೆ ತಲ್ವಾರ ಹಾಗೂ ರಾಡಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ತಾಲೂಕಿನ ಅಂಚಟಗೇರಿಯಲ್ಲಿ ನಡೆದಿದೆ.
ಅಂಚಟಗೇರಿಯ ಪರಶುರಾಮ ಪೆಟ್ರೋಲ್ ಬಂಕ್ ಸಮೀಪದಲ್ಲಿಯೇ ಈ ದುರ್ಘಟನೆ ನಡೆದಿದೆ. ಸುನಿಲ್ ಚೆಲವರಂ ಎಂಬ ಸರ್ದಾರಜಿಗೆ ಹೊಡೆಯಲಾಗಿದೆ. ಯಾವ ಕಾರಣಕ್ಕೆ ಹೀಗೆ ಮಾಡಲಾಗಿದೆ ಎಂಬುದು ಇನ್ನು ತಿಳಿದು ಬಂದಿಲ್ಲ.
ಕೆಲವರ ಪ್ರಕಾರ ಸರ್ದಾರನನ್ನ ಹೊಡೆದು ಹಣವನ್ನ ದೋಚಿಕೊಂಡು ಪರಾರಿಯಾಗಿದ್ದಾರೆಂದು ಹೇಳಲಾಗುತ್ತಿದೆ. ಅತೀವ ರಕ್ತಸ್ರಾವದಿಂದ ಬಳಲುತ್ತಿದ್ದ ಗಾಯಾಳುವನ್ನ ಹುಬ್ಬಳ್ಳಿಯ ಕಿಮ್ಸಗೆ ಅಂಬ್ಯುಲೆನ್ಸ್ ಮೂಲಕ ರವಾನೆ ಮಾಡಲಾಗಿದೆ. ಕಿಮ್ಸನ ತುರ್ತು ಚಿಕಿತ್ಸಾ ಘಟಕದಲ್ಲಿಟ್ಟು ಗಾಯಾಳುವಿಗೆ ಚಿಕಿತ್ಸೆ ನೀಡಲಾಗಿದೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮಾಹಿತಿ ಕಲೆ ಹಾಕಬೇಕಿದೆ.
Kshetra Samachara
02/01/2022 10:39 pm