ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದ ನುಚ್ಚಂಬ್ಲಿ ಬಾವಿಗೆ ಹಾರಿ ಯುವಕ ಆತ್ಮಹತ್ಯೆ

ಧಾರವಾಡ: ಧಾರವಾಡದ ಹೊಸಯಲ್ಲಾಪುರದಲ್ಲಿರುವ ನುಚ್ಚಂಬ್ಲಿ ಬಾವಿಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಶಿವಾನಂದನಗರದ ರಾಜೇಶ ಚಂದ್ರಶೇಖರ ಕುಂದಗೋಳ (35) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ರಾಜೇಶನ ಆತ್ಮಹತ್ಯೆಗೆ ಕಾರಣ ಏನು ಎಂದು ಸ್ಪಷ್ಟವಾಗಿ ಗೊತ್ತಾಗಿಲ್ಲ. ಘಟನಾ ಸ್ಥಳಕ್ಕೆ ಶಹರ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಶವವನ್ನು ಮೇಲೆತ್ತಿದ್ದಾರೆ.

ಈ ಸಂಬಂಧ ಶಹರ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

Edited By :
Kshetra Samachara

Kshetra Samachara

04/01/2022 07:52 pm

Cinque Terre

33.69 K

Cinque Terre

1

ಸಂಬಂಧಿತ ಸುದ್ದಿ