ಹುಬ್ಬಳ್ಳಿ: ಕೆಎಲ್‌ಇ ಸಂಸ್ಥೆ ಕಟ್ಟಿಸುತ್ತಿರುವ ಮೆಡಿಕಲ್ ಕಾಲೇಜ್ ಪಕ್ಕದ ಖುಲ್ಲಾ ಜಾಗದಲ್ಲಿ ಇಟ್ಟಿದ್ದ 4.20 ಲಕ್ಷ ಮೌಲ್ಯದ ಸೆಂಟ್ರಿಂಗ್ ಮತ್ತು ಬಾರ್ ಬೆಂಡಿಂಗ್ ಸಾಮಗ್ರಿಗಳನ್ನು ಕಳ್ಳತನ ಮಾಡಿರುವ ಕುರಿತು, ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಸಮೀರ ಅಹ್ಮದ ಬೀಳಗಿ ಎಂಬುವವರು ದೂರು ದಾಖಲಿಸಿದ್ದಾರೆ.
ಬಿಡ್ನಾಳ ಕ್ರಾಸ್ ಪಿ.ಬಿ. ರಸ್ತೆಯ ಎಸ್.ಸಿ. ಮಾನಶೆಟ್ಟರ ಗೋಡೌನ್ ಪಕ್ಕದಲ್ಲಿ ನಿರ್ಮಾಣವಾಗುತ್ತಿರುವ ಕೆಎಲ್ಇ ಸಂಸ್ಥೆಯ ಮೆಡಿಕಲ್ ಕಾಲೇಜ್ ಪಕ್ಕದ ಖುಲ್ಲಾ ಜಾಗೆಯಲ್ಲಿ ಇಟ್ಟಿದ್ದ ಕಬ್ಬಿಣದ ಸಾಮಗ್ರಿ ಕಳ್ಳತನ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
Kshetra Samachara
07/01/2022 12:50 pm