ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಪ್ರಾಪ್ತೆಯೊಂದಿಗೆ ವಿವಾಹವಾದ ಭೂಪ: ಶಹರ ಠಾಣೆಯಲ್ಲಿ ದೂರು ದಾಖಲು

ಹುಬ್ಬಳ್ಳಿ: ಇಲ್ಲಿಯ ಮಂಟೂರ ರಸ್ತೆಯ ಅಪ್ರಾಪ್ತೆಯನ್ನು ಯುವಕನೊಬ್ಬ ಪುಸಲಾಯಿಸಿ ಕರೆದುಕೊಂಡು ಹೋಗಿ ವಿವಾಹವಾಗಿರುವ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ಟರ್‌ ಅಲಿ ಬನ್ನೂರ ಎಂಬಾತ 17 ವರ್ಷದ ನನ್ನ ಮಗಳನ್ನು ಜ.4ರಂದು ಪುಸಲಾಯಿಸಿ ಕರೆದುಕೊಂಡು ಹೋಗಿದ್ದ. ಬಳಿಕ ಬಾಷಾಪೀರಾ ದರ್ಗಾದಲ್ಲಿ ಮೌಲಾನಾ ಜಕರಿಯಾ ಹೊಸೂರ ಎಂಬಾತನ ಸಹಾಯದಿಂದ ಮದುವೆ ಯಾಗಿದ್ದಾನೆ.

ಬಳಿಕ ಮದುವೆ ಸಂದರ್ಭದಲ್ಲಿ ಚಿತ್ರೀಕರಿಸಿದ್ದ ವೀಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ, ಬೆದರಿಸುತ್ತಿದ್ದಾನೆ ಎಂದು ಅಪ್ರಾಪ್ತೆಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ.

Edited By :
Kshetra Samachara

Kshetra Samachara

08/01/2022 10:15 am

Cinque Terre

24.55 K

Cinque Terre

1

ಸಂಬಂಧಿತ ಸುದ್ದಿ