ಹುಬ್ಬಳ್ಳಿ: ಸರ್ಕಾರಿ ಮಹಿಳಾ ಅಧಿಕಾರಿಯೊಬ್ಬರು ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
ಹೌದು. ಮೈಸೂರು ಮೂಲದ ಶಾಂತಲಾ ಸುಪ್ರೀತ ಬೆಳಗಾವಿ ಮೃತ ಮಹಿಳೆಯಾಗಿದ್ದು, ಇವರು ನೆಲಮಂಗಲದ ಪರಿಸರ ಅಭಿಯಂತರರು ಆಗಿದ್ದರು. ಇವರು ಭಾನುವಾರ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಡೆತ್ ನೋಟ್‌ನಲ್ಲಿ ಏನಿದೆ ಎಂಬ ಬಗ್ಗೆ ಪೊಲೀಸರು ಮಾಹಿತಿ ಬಹಿರಂಗಪಡಿಸಿಲ್ಲ. ಶಾಂತಲಾ ಅವರು ತೀವ್ರವಾದ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಅಲ್ಲದೇ ಅಕ್ಟೋಬರ್‌ನಲ್ಲಿ ಇವರ ಮಗಳು ಸಹ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು. ಇದೀಗ ಶಾಂತಲಾ ಕೂಡ ತಮ್ಮ ಪತಿ ನಡೆಸುತ್ತಿದ್ದ ಲಾಡ್ಜ್ ನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.
ಈ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ನಷ್ಟೇ ಪೊಲೀಸರ ತನಿಖೆಯಿಂದ ಸತ್ಯಾಸತ್ಯತೆ ಹೊರಬರಬೇಕಿದೆ.
Kshetra Samachara
10/01/2022 01:02 pm