ಹುಬ್ಬಳ್ಳಿ: ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜ. 8ರಂದು ನಡೆದಿದ್ದ ಮನೆಗಳ್ಳತನ ಪ್ರಕರಣವನ್ನು ಭೇದಿಸಿರುವಲ್ಲಿ ಕಸಬಾಪೇಟ ಠಾಣೆ ಪೊಲೀಸರು 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯಿಂದ 2,41,614 ರೂ. ಮೌಲ್ಯದ ಎರಡು ಐಫೋನ್ ಪ್ರೊ ಹಾಗೂ ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇನ್‌ಸ್ಪೆಕ್ಟರ್ ಅಡೆಪ್ಪ ಬನ್ನಿ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿದೆ. ತಂಡದ ಕಾರ್ಯವನ್ನು ಹು-ಧಾ ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ.
Kshetra Samachara
11/01/2022 11:18 am