ಹುಬ್ಬಳ್ಳಿ: ಬ್ಯಾಂಕ್ ಖಾತೆಯ ಯಾವುದೇ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳದಿದ್ದರೂ ವ್ಯಕ್ತಿಯೊಬ್ಬರ ಖಾತೆಯಿಂದ 97,500 ರೂ. ವರ್ಗಾವಣೆ ಮಾಡಿಕೊಂಡು ವಂಚಿಸಿರುವ ಕುರಿತು ಹುಬ್ಬಳ್ಳಿ-ಧಾರವಾಡ ಸೈಬರ್ ಕೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಣ್ಣಿಗೇರಿ ತಾಲೂಕು ನಲವಡಿ ಗ್ರಾಮದ ನಾಗಪ್ಪ ನರಗುಂದ ವಂಚನೆಗೀಡಾದವರು. ತಾನು ಬ್ಯಾಂಕ್ ಖಾತೆ ಹಾಗೂ ಎಟಿಎಂ ಕಾರ್ಡ್‌ನ ಯಾವುದೇ ವಿವರವನ್ನು ಯಾರಿಗೂ ನೀಡಿರಲಿಲ್ಲ. ಯಾವುದೇ ನೆಟ್ ಬ್ಯಾಂಕಿಂಗ್ ಸೌಲಭ್ಯವನ್ನೂ ಹೊಂದಿಲ್ಲ. ಆದರೂ ತನ್ನ ಕೆನರಾ ಬ್ಯಾಂಕ್ ಖಾತೆಯಿಂದ ಡಿ. 30ರಿಂದ ಜ. 5ರವರೆಗೆ ಹಣ ಡ್ರಾ ಮಾಡಿಕೊಳ್ಳುವ ಮೂಲಕ ವಂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Kshetra Samachara
12/01/2022 09:18 am