ಧಾರವಾಡ: ಧಾರವಾಡದ ಸಿಂಧೂರ ಹಾಲ್ ಹತ್ತಿರ ಇರುವ ಭಾರತ ಗ್ಯಾಸ್ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ ಮೂರ್ನಾಲ್ಕು ಜನ ಪುಂಡರು ಸೇರಿಕೊಂಡು ಹಲ್ಲೆ ನಡೆಸಿರುವ ಘಟನೆ ಮೊನ್ನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ರತ್ನಾ ನರಗುಂದ ಎಂಬ ಮಹಿಳೆ ಮೇಲೆ ಆಕೆಯ ಪರಿಚಯಸ್ಥರೇ ಕ್ಷುಲ್ಲಕ ಕಾರಣಕ್ಕಾಗಿ ಬಡಿಗೆಗಳಿಂದ ಹಲ್ಲೆ ನಡೆಸಿದ್ದಾರೆ. ರತ್ನಾ ಕೆಲಸ ಮಾಡುತ್ತಿದ್ದ ಭಾರತ ಗ್ಯಾಸ್ ಏಜೆನ್ಸಿಗೆ ನುಗ್ಗಿದ ಕೆಲವರು ಶೆಟ್ಟರ್ಸ್ ಹಾಕಿ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ. ಈ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹಲ್ಲೆಗೊಳಗಾದ ಯುವತಿ ಸದ್ಯ ಜರ್ಮನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಮಂಜುನಾಥ ಹೂಗಾರ ಹಾಗೂ ಭರತ ಹೂಗಾರ ಎಂಬುವವರು ತಮ್ಮ ಮೇಲೆ ಹಲ್ಲೆ ನಡೆಸಿರುವುದಾಗಿ ರತ್ನಾ ಆರೋಪಿಸಿದ್ದಾಳೆ. ಈ ಸಂಬಂಧ ಉಪನಗರ ಠಾಣೆಯಲ್ಲಿ ದೂರು ನೀಡಿದ್ದರೂ ಪೊಲೀಸರು ಮಾತ್ರ ಇದುವರೆಗೂ ಆರೋಪಿಗಳನ್ನು ಬಂಧಿಸಿಲ್ಲ. ಸದ್ಯ ಕೈಗೆ ಬಲವಾದ ಪೆಟ್ಟು ಬಿದ್ದಿರುವ ರತ್ನಾ ಅವರಿಗೆ ಜರ್ಮನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಡಹಗಲೇ ಒಬ್ಬ ಹೆಣ್ಣು ಮಗಳ ಮೇಲೆ ಈ ಹಲ್ಲೆ ನಡೆದಿದ್ದು ಆತಂಕಕಾರಿ ವಿಷಯ.
Kshetra Samachara
27/01/2022 02:49 pm